LatestUncategorized

*ಮತ್ತೆ ಇಬ್ಬರು ಪ್ರಭಾವಿ ಶಾಸಕರಿಗೆ BJP ಶಾಕ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆಯಾಗಿದ್ದು 10 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹಾಲಿ ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಅರವಿಂದ ಲಿಂಬಾವಳಿಗೆ ಟಿಕೆಟ್ ಕೈತಪ್ಪಿದೆ.

ಮೈಸೂರಿನ ಕೃಷ್ಣರಾಜ ಕ್ಷೇತ್ರದ ಹಾಲಿ ಶಾಸಕರಾಗಿರುವ ಎಸ್.ಎ.ರಾಮದಾಸ್ ಅವರಿಗೆ ಈಬಾರಿ ಬಿಜೆಪಿ ಟಿಕೆಟ್ ನೀಡಿಲ್ಲ. ರಾಮದಾಸ್ ಬದಲಿಗೆ ಶ್ರೀವತ್ಸ ಅವರಿಗೆ ಟಿಕೆಟ್ ನೀಡಲಾಗಿದೆ.

Home add -Advt

ಇನ್ನೋರ್ವ ಶಾಸಕ ಅರವಿಂದ್ ಲಿಂಬಾವಳಿ ಅವರಿಗೂ ಟಿಕೆಟ್ ಕೈತಪ್ಪಿದೆ. ಮಹದೇವಪುರ ಕ್ಷೇತ್ರದ ಹಾಲಿ ಶಾಸಕ ಅರವಿಂದ್ ಲಿಂಬಾವಳಿ ಅವರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ, ಅರವಿಂದ್ ಲಿಂಬಾವಳಿ ಬದಲು ಅವರ ಪತ್ನಿ ಮಂಜುಳಾ ಲಿಂಬಾವಳಿ ಅವರನ್ನು ಕಣಕ್ಕಿಳಿಸಲಾಗಿದೆ.

ಇನ್ನು ಗೋವಿಂದರಾಜನಗರ ಟಿಕೆಟ್ ಆಕಾಂಕ್ಷಿಯಾಗಿದ್ದ ಸಚಿವ ವಿ.ಸೋಮಣ್ಣ ಅವರ ಪುತ್ರ ಅರುಣ್ ಸೋಮಣ್ಣ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಉಮೇಶ್ ಶೆಟ್ಟಿ ಅವರಿಗೆ ನೀಡಲಾಗಿದೆ. ನಾಗಠಾಣಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸಚಿವ ಗೋವಿಂದ ಕಾರಜೋಳ ಅವರ ಪುತ್ರನಿಗೂ ಟಿಕೆಟ್ ಮಿಸ್ ಆಗಿದ್ದು, ಸಂಜಯ್ ಐಹೊಳೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

https://pragati.taskdun.com/d-k-shivakumarreactionjagadish-shettarbjp-join/

Related Articles

Back to top button