Latest

ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಬೆಂಬಲಿಗರ ಅಭಿಯಾನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ದಿನದಿಂದ ದಿನಕ್ಕೆ ಆಕಾಂಕ್ಷಿಗಳ ಪಟ್ಟಿ  ಹೆಚ್ಚುತ್ತಿದೆ.  ಸಿದ್ದರಾಮಯ್ಯ ಬಣ, ಮೂಲ ಕಾಂಗ್ರೆಸ್ ಬಣ, ಡಿ.ಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ಎಸ್.ಆರ್.ಪಾಟೀಲ್ ಸೇರಿದಂತೆ ಅನೇಕ ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದಾರೆ. ಇದೀಗ ಮಾಜಿ ಸಚಿವ ರಾಮಲಿಂಗಾರೆಡ್ಡಿ ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಭಿ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರಿಗೆ ನೀಡಬೇಕು ಎಂದು ಅಭಿಯಾನ ಆರಂಭವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ  ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಹಾಲಿ ಕಾರ್ಪೋರೇಟರ್ ಗಳು ಅಭಿಯಾನ ಪ್ರಾರಂಭಿಸಿದ್ದಾರೆ.

ರಾಮಲಿಂಗಾರೆಡ್ಡಿ 7 ಬಾರಿ ಶಾಸಕರು. ಪಕ್ಷದ ಹಿರಿಯ ಮುಖಂಡರು. ಪಕ್ಷಕ್ಕಾಗಿ ಎಲ್ಲಾ ತ್ಯಾಗ, ಸಹಕಾರ ಕೊಟ್ಟಿದ್ದಾರೆ. ಸಚಿವರಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಎಲ್ಲರನ್ನು ಸರಿದೂಗಿಸಿಕೊಂಡು ಹೋಗೋ ಸಾಮರ್ಥ್ಯ ಇದೆ. ಹೀಗಾಗಿ ರಾಮಲಿಂಗಾರೆಡ್ಡಿಗೆ ಅಧ್ಯಕ್ಷ ಸ್ಥಾನ ಕೊಟ್ಟರೆ ಪಕ್ಷವನ್ನು ಇನ್ನಷ್ಟು ಬಲ ಪಡಿಸಬಹುದು ಎಂಬುದು ರೆಡ್ಡಿ ಬೆಂಬಲಿಗರ ವಾದ.

ಒಟ್ಟಾರೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಹೈಕಮಾಂಡ್ ಯಾರಿಗೆ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.

Home add -Advt

ಸಿದ್ದರಾಮಯ್ಯ ಬಳಿ ಡಿ.ಕೆ ಶಿವಕುಮಾರ್ ಇಟ್ಟ ಮನವಿಯೇನು?  

ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರ: ಸಿದ್ದರಾಮಯ್ಯ ಭೇಟಿಯಾದ ಡಿ.ಕೆ ಶಿವಕುಮಾರ್

ಕಾಂಗ್ರೆಸ್ ನನಗೆ ಎಲ್ಲವನ್ನೂ ಕೊಟ್ಟಿದೆ, ಈಗ ಏನನ್ನೂ ಕೇಳುವ ಪ್ರಶ್ನೆ ಇಲ್ಲ ಎಂದ ಡಿ.ಕೆ. ಶಿವಕುಮಾರ್

ಮಾಜಿ ಡಿಸಿಎಂ ಪರಮೇಶ್ವರ್ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಮಹತ್ವದ ಸಭೆ

Related Articles

Back to top button