*ಅಬಕಾರಿ ಇನ್ಸ್ ಪೆಕ್ಟರ್ ನನ್ನೇ ಶೂಟ್ ಮಾಡಿ ಹತ್ಯೆಗೈದಿದ್ದ ಮಾಜಿ ಸಚಿವ; ಗೋಕಾಕ್ ಮಿಲ್ ಹತ್ಯಾಕಾಂಡದ ನೇತೃತ್ವ ವಹಿಸಿದ್ದೂ ಇದೇ ಶಾಸಕರು; ರಮೇಶ್ ಜಾರಕಿಹೊಳಿ ವಿರುದ್ಧ ಎಂ.ಲಕ್ಷ್ಮಣ್ ಗಂಭೀರ ಆರೋಪ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಆಡಿಯೋ ಬಾಂಬ್ ಬಿಡುಗಡೆ ಮಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಇದೀಗ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸಾಲು ಸಾಲು ಗಂಭೀರ ಆರೋಗಳನ್ನು ಮಾಡಿ ಫೋಟೋ ಬಿಡುಗಡೆ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್,1988ರಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಟೀಂ ಅಬಕಾರಿ ಇನ್ಸ್ ಪೆಕ್ಟರ್ ಇಂಗಳಗೆಯವರನ್ನು ಎಕೆ 47ನಿಂದ ಶೂಟ್ ಮಾಡಿ ಕೊಲೆ ಮಾಡಿದ್ದರು ಎಂದು ಆರೋಪಿಸಿದ್ದಾರೆ.
1985ರಲ್ಲಿ ಡಿಕೆಶಿ ಹರಿದ ಚಪ್ಪಲಿ ಹಾಕುತ್ತಿದ್ದ ಎಂಬ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ ಲಕ್ಷ್ಮಣ್, 1985ರಲ್ಲಿ ರಮೇಶ್ ಜಾರಕಿಹೊಳಿ ಎರಡೂ ಕಾಲಿಗೆ ಬೇರೆ ಬೇರೆ ಚಪ್ಪಲಿ ಹಾಕಿಕೊಂಡು ಓಡಾಡುತ್ತಿದ್ದರು ಎಂದು ಟೀಕಿಸಿದ್ದಾರೆ.
30 ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿ ಖರೀದಿಗೆ ಜಾರಕಿಹೊಳಿ ಕುಟುಂಬದ ಅನುಮತಿ ಪಡೆಯಬೇಕಿತ್ತು. ಅನುಮತಿ ಪಡೆಯದಿದ್ದರೆ ಅಟ್ರಸಿಟಿ ರೇಪ್ ಪ್ರಕರಣ ದಾಖಲಿಸುತ್ತಿದ್ದರು. ಸುಮಾರು 300 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಈ ಹಿಂದೆ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಕಳ್ಳಭಟ್ಟಿ ಸಾರಾಯಿ ಮಾರುತ್ತಿದ್ದರು ಎಂದು ಸಾಲು ಸಾಲು ಆರೋಪ ಮಾಡಿದ್ದಾರೆ.
1994ರಲ್ಲಿ ಗೋಕಾಕ್ ಸರ್ಕಾರಿ ಮಿಲ್ ನಲ್ಲಿ ಹತ್ಯಾಕಾಂಡ ನಡೆದಿತ್ತು. ಹತ್ಯಾಕಾಂಡದ ನೇತೃತ್ವ ವಹಿಸಿದ್ದೇ ಶಾಸಕ ರಮೇಶ್ ಜಾರಕಿಹೊಳಿ ಎಂದು ಎಂ.ಲಕ್ಷ್ಮಣ್ ಸಾಲು ಸಾಲು ಆರೋಪ ಮಾಡಿದ್ದಾರೆ.
https://pragati.taskdun.com/vidhanasabha-electioncongressbelagavi12-seatm-b-patil/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ