ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಾಜಿ ಶಾಸಕ ಅಶೋಕ ಪಟ್ಟಣ ಅವರಿಗೆ ಕೆಪಿಸಿಸಿ ನೋಟೀಸ್ ಜಾರಿ ಮಾಡಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ವಿರುದ್ಧ ಅರ ಘನತೆಗೆ ಧಕ್ಕೆ ತರುವ ರೀತಿಯಲ್ಲಿ ಮಾತನಾಡಿದ್ದೀರಿ. ಇದಕ್ಕೆ 7 ದಿನಗಳಲ್ಲಿ ಸಮಜಾಯಿಸಿ ನೀಡಿ ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಆಡಿದ ಪಿಸು ಮಾತಿಗೆ ಈ ನೋಟೀಸ್ ಜಾರಿಗೊಳಿಸಲಾಗಿದೆ. ಸಿದ್ದರಾಮಯ್ಯ ಜೊತೆ ಮಾತನಾಡುವಾಗ ಡಿ.ಕೆ.ಶಿವಕುಮಾರ ಹೆಸರು ಉಲ್ಲೇಖಿಸಿ, ಅವರ ಘನತೆಗೆ ಧಕ್ಕೆ ಬರುವಂತೆ ಮಾತನಾಡಿದ್ದರು. ಅದು ಮಾಧ್ಯಮಗಳ ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗಿತ್ತು.
ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾಂಗ್ರೆಸ್ ಶಿಸ್ತು ಸಮಿತಿ ನೋಟೀಸ್ ಜಾರಿಗೊಳಿಸಿದೆ.
ಬಡವರ ಏಳಿಗೆ ಬಜೆಟ್ ಮೂಲ ಉದ್ದೇಶ; ಅಭಿವೃದ್ಧಿಪರ ಜನಸ್ನೇಹಿ ಬಜೆಟ್ ಗೆ ಅಭಿನಂದನೆ ಎಂದ ಪ್ರಧಾನಿ ಮೋದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ