ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಖಾಸಗಿ ಕೃಷಿ ಉತ್ಪನ್ನ ಮಾರುಕಟ್ಟೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಎಪಿಎಂಸಿ ಬಳಿ ಅಮರಣಾಂತ ಉಒವಾಸ ಸತ್ಯಾಗ್ರಹ ನಡೆಸುತ್ತಿದ್ದ ಹಲವು ರೈತ ಸಂಘಟನೆಗಳ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶನಿವಾರ ಭೇಟಿ ಮಾಡಿ ಉಪವಾಸ ಅಂತ್ಯಗೊಳಿಸುವಲ್ಲಿ ಯಶಸ್ವಿಯಾದರು.
ಮುಂಬರುವ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಅವರ ಬೇಡಿಕೆಗಳ ಈಡೇರಿಕೆಗೆ ಸರಕಾರದ ಮೇಲೆ ಒತ್ತಡ ತರುವುದಾಗಿ ಭರವಸೆ ನೀಡಿದರು. ರೈತ ಮುಖಂಡ ಸಿದಗೌಡ ಮೊದಗಿ ಅವರಿಗೆ ಎಳನೀರು ಕುಡಿಸುವ ಮೂಲಕ ನಿರಶನ ಕೈಬಿಡುವಂತೆ ಮನವಿ ಮಾಡಿದರು. ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ರಾಜು ಸೇಠ್, ಮಾಜಿ ಸಚಿವ ವೀರಕುಮಾರ ಪಾಟೀಲ ಮೊದಲಾದವರು ಇದ್ದರು.
ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ
ಖಾಸಗಿ ಕೃಷಿ ಉತ್ಪನ್ನ ಮಾರುಕಟ್ಟೆ ವಿವಾದ: ಸಿದ್ದರಾಮಯ್ಯ ಬಳಿ ನಿಯೋಗ ಒಯ್ಯಲಾಗುವುದು ಎಂದ ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ