ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆ ಇನ್ನಷ್ಟು ವಿಳಂಬ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಕಾರ್ಯಾಧ್ಯಕ್ಷ ಸ್ಥಾನಗಳ ಬಗ್ಗೆ ಹೈಕಮಾಂಡ್ ಇಂದು ಅಂತಿಮ ನಿರ್ಧಾರ ಕೈಗೊಳುವ ಸಾಧ್ಯತೆಯಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಯೂ ವಿಳಂಬವಾಗಲಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೆಸರನ್ನು ಹೈಕಮಾಂಡ್ ಫೈನಲ್ ಮಾಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಆದರೆ ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಭಾನುವಾರ ಅಥವಾ ಸೋಮವಾರ ಘೋಷಣೆ ಮಾಡಲಿದೆ.

Related Articles

ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಈಗಾಗಲೇ ಡಿ.ಕೆ ಶಿವಕುಮಾರ್ ಕೂಡ ವಿರೋಧ ವ್ಯಕ್ತಪಡಿಸಿದ್ದು, ಈಗಿರುವ ಓರ್ವ ಕಾರ್ಯಾಧ್ಯಕ್ಷರೇ ಮುಂದುವರೆಯಲಿ ಎಂದು ಹೈಕಮಾಂಡ್ ಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

Home add -Advt

Related Articles

Back to top button