ಪ್ರಗತಿವಾಹಿನಿ ಸುದ್ದಿ, ನವದೆಹಲಿ:
ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಬಳಿಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪುನಾರಚಿಸಲು ಪಕ್ಷದ ಹೈ ಕಮಾಂಡ್ ಸೂಚಿಸಿದೆ.
ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ಉಳಿದೆಲ್ಲ ಹುದ್ದೆಗಳನ್ನು ಪುನರ್ ರಚಿಸಬೇಕೆಂದು ಸೂಚಿಸಲಾಗಿದ್ದು, ಪಕ್ಷ ಸಂಪೂರ್ಣ ಹೊಸ ಲುಕ್ ಪಡೆಯಲಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ನವದೆಹಲಿಯಲ್ಲಿದ್ದು, ಹೈಕಮಾಂಡ್ ನಾಯಕರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಪಕ್ಷದ ಉಪಾಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ಎಲ್ಲ ಪದಾಧಿಕಾರಿಗಳು, ವಿವಿಧ ಸಮಿತಿಗಳ ಪದಾಧಿಕಾರಿಗಳು ಬದಲಾಗಲಿದ್ದಾರೆ.
ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಮಧ್ಯಂತರ ಚುನಾವಣೆ ಬರಬಹುದು ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಕೆಪಿಸಿಸಿ ಈ ಬದಲಾವಣೆಗೆ ಮುಂದಾಗಿದೆ ಎನ್ನಲಾಗಿದೆ.
ಎಲ್ಲ ಸಮಿತಿಗಳ ಪುನಾರಚನೆಯ ನಂತರ ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರ ಬದಲಾವಣೆಯೂ ಆಗಬುಹುದು ಎನ್ನಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ