Kannada NewsKarnataka NewsLatest
ಖಾನಾಪುರ ತಾಲೂಕಿನಾದ್ಯಂತ ಶಿಕ್ಷಕರ ಮತ ಯಾಚಿಸಿದ ಡಾ.ಸೋನಾಲಿ ಸರ್ನೋಬತ್


ಪ್ರಗತಿವಾಹಿನಿ ಸುದ್ದಿ, ಖಾನಾಪುರ – ಇದೇ 13ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ, ಸಾಮಾಜಿಕ ಕಾರ್ಯಕರ್ತೆ ಡಾ.ಸೋನಾಲಿ ಸರ್ನೋಬತ್ ಅವರು ಖಾನಾಪುರ ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗಳ ಮತ ಯಾಚಿಸಿದರು.
ಪ್ರತಿ ಶಾಲೆಗಳಿಗೆ ಭೇಟಿ ನೀಡಿದ ಅವರು ವಾಯವ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ ಮತ್ತು ಪದವೀಧರ ಕ್ಷೇತ್ರದ ಅಭ್ಯರ್ಥಿ ಹನುಮಂತ ನಿರಾಣಿ ಅವರಿಗೆ ಮತ ನೀಡುವಂತೆ ಶಿಕ್ಷಕರಲ್ಲಿ ವಿನಂತಿಸಿದರು.
ಬಿಜೆಪಿ ಕಾರ್ಯಕರ್ತರಾದ ರಮೇಶ ಪಾಟೀಲ, ನಿವೃತ್ತ ಶಿಕ್ಷಕ ಬೆಡರೆ, ಕಂಪ್ಯೂಟರ್ ಇನ್ ಸ್ಟಿಟ್ಯೂಟ್ ಕೋ ಆರ್ಡಿನೇಟರ್ ಉಂದ್ರೆ ಮೊದಲಾದವರು ಜೊತೆಗಿದ್ದರು.




