Kannada NewsKarnataka News

ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಸ್ವಾಗತಿಸಿದ ಸತೀಶ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಂಗ್ರೆಸ್‌ ಪಕ್ಷದಲ್ಲಿ ಬಣ ರಾಜಕೀಯ ಇಲ್ಲ. ಸಿದ್ದರಾಮೋತ್ಸವ ಕಾರ್ಯಕ್ರಮ ಹೆಸರಲ್ಲಿ ಕೆಲವರು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅದು  ಸಿದ್ದರಾಮೋತ್ಸವ ಅಲ್ಲ, ಸಿದ್ದರಾಮಯ್ಯನವರ 75ನೇ ಜನ್ಮದಿನದ ಕಾರ್ಯಕ್ರಮ. ಈ ಕಾರ್ಯಕ್ರಮವನ್ನು ಮೊದಲು ಸಿದ್ದರಾಮಯ್ಯನವರ ಅಭಿಮಾನಿಗಳು ಆಚರಿಸುವ ತಯಾರಿಯಲ್ಲಿದ್ದರು. ಆದರೆ ಈಗ ಪಕ್ಷದ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕಳೆದ ಮೂರು ವರ್ಷಗಳಿಂದ ನಿರಂತರ ಪ್ರವಾಹ ಉಂಟಾಗುತ್ತಿದ್ದು, ಮತ್ತೆ ಈ ವರ್ಷವೂ ಭಾರೀ ಮಳೆ ಆಗುತ್ತಿದೆ. ಆದ್ದರಿಂದ ಪ್ರವಾಹ ಉಂಟಾಗುವ ಸಾಧ್ಯತೆಗಳಿದ್ದು, ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಜನರಿಗೆ ತೊಂದರೆ ಆಗದಂತೆ ಶೀಘ್ರ ಅಧಿಕಾರಿಗಳ ಸಭೆ ನಡೆಸಿ ಕ್ರಮಕೈಗೊಳ್ಳಬೇಕೆಂದು  ಶಾಸಕ ಸತೀಶ್‌ ಜಾರಕಿಹೊಳಿ  ಆಗ್ರಹಿಸಿದರು.

ಸರ್ಕಾರ, ಸಚಿವರು, ಜಿಲ್ಲಾಡಳಿತ ಎಲ್ಲಾ ರೀತಿಯ ಸಮಸ್ಯೆಗಳನ್ನು ಅವಲೋಕಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡಬೇಕು. ಶಾಲೆಗಳ, ರಸ್ತೆಗಳ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕೆಂದು ಅವರು ತಿಳಿಸಿದರು.

ಬಿಜೆಪಿ  ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ:

ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಜನರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ  ಹೇಳಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಗ್ರಾಪಂ ಸದಸ್ಯರಾದ ಬಸವಾರಾಜ ನಾಯ್ಕ, ಪಿಂಟು ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಕಲಖಾಂಬ ಗ್ರಾಮದ ಅನೇಕ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಸೇರ್ಪಡೆಮಾಡಿಕೊಂಡು ಅವರು ಮಾತನಾಡಿದರು.

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಯುವಕರಿಗೆ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಆದರೆ ಈ ಎಲ್ಲ ಸಮಸ್ಯೆಗಳಿಗೆ ಯಾವ ಬಿಜೆಪಿ ನಾಯಕರು ಸ್ಪಂದಿಸುತ್ತಿಲ್ಲ. ಹೀಗಾಗಿ ಸಾರ್ವಜನಿಕರು ಕಾಂಗ್ರೆಸ್‌ ಕಡೆ ಒಲವು ತೋರುತ್ತಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದ ರಾಜು ಪಾಟೀಲ, ಸಂತೋಷ ನಿರೊಜಿ, ರಮೇಶ ಪಾಟೀಲ, ಅಪ್ಪಾಜಿ ಸಾವಿ, ಮಾರುತು ಬೆಳಗಾಂವಕರ, ಜ್ಯೋತಿಬಾ ಮಾಸೇಕರ ಸೇರಿದಂತೆ ನೂರಾರು ಕಾರ್ಯಕರ್ತರನ್ನು ಶಾಸಕ ಸತೀಶ್‌ ಜಾರಕಿಹೊಳಿ  ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಅರವಿಂದ ಕಾರಚಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ, ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇತರರು ಇದ್ದರು.

ನೂತನ ಪದಾಧಿಕಾರಿ ನೇಮಕ:

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿಯವರ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಎಸ್ಟಿ ಘಟಕದ ನೂತನ ಉಪಾಧ್ಯಕ್ಷರನ್ನಾಗಿ ಮಾರುತಿ ರಾಮಚಂದ್ರ ಪೂಜಾರ ಅವರನ್ನು ನೇಮಕ ಮಾಡಿ ಜಿಲ್ಲಾ ಕಾಂಗ್ರೆಸ್‌ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷರಾದ ಬಾಳೆ ದಾಸನಟ್ಟಿ ಆದೇಶ ಹೊರಡಿಸಿದ್ದಾರೆ.

ಶುಕ್ರವಾರ ಕಾಂಗ್ರೆಸ್‌ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾರುತಿ ರಾಮಚಂದ್ರ ಪೂಜಾರ ಅವರಿಗೆ ಸತೀಶ ಜಾರಕಿಹೊಳಿ ಅವರು ಅಧಿಕೃತ ಆದೇಶ ಪ್ರತಿ ನೀಡಿದರು.
ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ಚಿತ್ರೀಕರಣಕ್ಕೆ ನಿಷೇಧ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button