Karnataka News

*ನಿವೃತ್ತಿ ದಿನವೇ ಲೋಕೋಪಯೋಗಿ ಇಲಾಖೆ ಚೀಫ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ*

ಧಾರವಾಡ: ನಿವೃತ್ತಿ ದಿನವೇ ಲೋಕೋಪಯೋಗಿ ಇಲಾಖೆ ಚೀಫ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಧಾರವಾಡದ ಲೋಕೋಪಯೋಗಿ ಇಲಾಖೆ ಚೀಫ್ ಇಂಜಿನಿಯರ್ ಹೆಚ್.ಸುರೇಶ್ ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಸಿಡಿ ಗಣಪತಿ ದೇವಸ್ಥಾನದ ಹಿಂಭಾಗದಲ್ಲಿರುವ ಸುರೇಶ್ ಅವರ ಸರ್ಕಾರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸುರೇಶ್ ಅವರು ಇಂದೇ ಸೇವೆಯಿಂದ ನಿವೃತ್ತಿಯಾಗಲಿದ್ದರು. ಸೇವೆಯ ಕೊನೇ ದಿನವೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಿಗ್ ಶಾಕ್ ನೀಡಿದ್ದಾರೆ.

ಆದಾಯಮೀರಿ ಆಸ್ತಿ ಗಳಿಕೆ ಆರೋಪ ಸುರೇಶ್ ಮೇಲೆ ಇದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button