*ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ನಾಮಕರಣ: ಸರ್ಕಾರಕ್ಕೆ ಕೆಪಿಸಿಸಿ ಒತ್ತಾಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳನು ರಾಷ್ಟ್ರಪಿತ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಕಚೇರಿ ಎಂದು ನಾಮಕರಣ ಮಾಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.
ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಗ್ರಾಮೀಣ ಭಾಗದ ಯ್ವಕ-ಯುವತಿಯರಿಗೆ ಉದ್ಯೋಗ ಸೃಷ್ಟಿಸಲು ಮಾಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾಅತ್ರಿ ಯೋಜನೆ ಕಾಯ್ದೆ ಮಾಡಿ ರಾಷ್ಟ್ರದ ನಿರುದ್ಯೋಗ ಹಾಗೂ ಬಡತನ ಸಮಸ್ಯೆಗಳಿಗೆ ಪರಿಹಾರ ರೋಪಿಸಲು ಕಾಯ್ದೆ ಮಾಡಿ ಉದ್ಯೋಗ ಸೃಷ್ಟಿಸಿತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ಅದೇ ಕಾಯ್ದೆಯನ್ನು ವಿಬಿಜಿ ರಾಅಮ್ ಜಿ ಎಂದು ಹೆಸರು ಬದಲಿಸಿ ತಿದ್ದುಪಡಿ ಮಾಡಿದ್ದಲ್ಲದೇ ಮಹಾತಾಮಾ ಗಾಂಧಿ ಹೆಸರನ್ನು ತೆಗೆದು ಹಾಕಿ ರಾಷ್ಟ್ರಪಿತನಿಗೆ ಅವಮಾನ ಮಾಡಿದೆ. ಇದನ್ನು ಯಾರೊಬ್ಬರೂ ಸಹಿಸಲ್ಲ.
ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹೆಸರು ಚಿರಸ್ಥಾಯಿಗೊಳಿಸಲು ರಾಜ್ಯದ 6000ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಹಾಗೂ ಇತರೆ ಸ್ಥಳಯೀಯ ಸಂಸ್ಥೆಗಳ ಕಚೇರಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ ಕಚೇರಿ ಎಂದು ನಾಮಕರಣ ಮಾಡಲು ಕೆಪಿಸಿಸಿ ಕೋರಿದೆ.

