Karnataka News

*ಮಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್*

ಪ್ರಗತಿವಾಹಿನಿ ಸುದ್ದಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಎಲ್ಲೆಲ್ಲೂ ಸಡಗರ-ಸಂಭ್ರಮ ಮನೆ ಮಾಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧ್ವಜಾರೋಹಣ ನೆರವೇರಿಸಿದರು.

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್ ಬ್ಯಾಂಡ್ ಗಳಿಂದ ರಾಷ್ಟ್ರಗೀತೆ ಮೊಳಗಿಸಲಾಯಿತು.

Home add -Advt

ಈ ವೇಳೆ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಇಂದು ದೇಶಕ್ಕೆ ಐತಿಹಾಸಿಕ ದಿನ. ಕಾನೂನಿನ ಮುಂದೆ ಎಲ್ಲರೂ ಒಂದೇ. ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪಂಚ ಗ್ಯಾರಂಟಿ ಮೂಲಕ ದೇಶಕ್ಕೆ ಹೊಸ ಸಂದೇಶವನ್ನು ನೀಡಲಾಗಿದೀಂದು ತಿಳಿಸಿದರು.

Related Articles

Back to top button