Karnataka News

*ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್: ಪ್ರವಾಸಿಗರ ಮೇಲೆ ಹಲ್ಲೆ: ಇಬ್ಬರು ಕಾಮುಕರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹೋಂ ಸ್ಟೇ ಮೇಲೆ ದಾಳಿ ನಡೆದಿದ್ದ ಮೂವರು ದುಷ್ಕರ್ಮಿಗಳು ವಿದೇಶಿ ಪ್ರವಾಸಿ ಮಹಿಳೆಯ ಮೇಲೆ ಹಾಗೂ ಹೋಂ ಸ್ಟೇ ಒಡತಿಯ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಘಟನೆ ನಡೆದಿದೆ.

ಮಹಿಳೆಯರ ಇಬ್ಬರ ಮೇಲೂ ಕಾಮುಕರು ಗ್ಯಾಂಗ್ ರೇಪ್ ನಡೆಸಿ ಅಟ್ಟಹಾಸ ಮೆರೆದಿದ್ದಾರೆ. ಅಲ್ಲದೇ ಹೋಂ ಸ್ಟೇಯಲ್ಲಿದ್ದ ಇತರ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿಗೊಳಿಸಿದ್ದಾರೆ.

ಮಾರ್ಚ್ 6ರಂದು ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೊಪ್ಪಳ ಜಿಲ್ಲೆ ಗಂಗಾವತಿ ಗ್ರಾಮಾಂತರ ಠಾಣೆ ಪೊಲೀಸರು ಇಂದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಲ್ಲೇಶ್ ಅಲಿಯಾಸ್ ಹಂದಿ ಮಲ್ಲ ಹಾಗೂ ಚೇತನ್ ಸಾಯಿ ಎಂದು ಗುರುತಿಸಲಾಗಿದೆ.

ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button