Kannada NewsKarnataka NewsLatest

*ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದ ರಾಜ್ಯಪಾಲರು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ತನಿಖೆಗೆ ಆದೇಶಿಸಿದ್ದಾರೆ.

ಶಿವಶಂಕರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಶಿಫಾರಸು ಮಾಡಿದ್ದು, ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವ ಸಂಬಂಧ ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ.

ತನಿಖೆ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶ ಹೊರಬೀಳುವವರೆಗೆ ಕೆಪಿಎಸ್‌ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ.

ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸ್ವಜನಪಕ್ಷಪಾತ ಸೇರಿದಂತೆ ವಿವಿಧ ಆರೋಪಗಳು ಕೇಳಿಬಂದಿದ್ದವು. ಈ ಆರೋಪಗಳ ಕುರಿತು ಸಲ್ಲಿಕೆಯಾಗಿದ್ದ ದೂರಿನ ಆಧಾರದ ಮೇಲೆ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆ.

ಕೆಲ ದಿನಗಳ ಹಿಂದೆ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ವಿರುದ್ಧವೂ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಹುದ್ದೆಗಾಗಿ ನಕಲಿ ಆದಾಯ ಪತ್ರ ಮತ್ತು ಜಾತಿ ಪ್ರಮಾಣಪತ್ರಗಳನ್ನು ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button