ಪ್ರಗತಿವಾಹಿನಿ ಸುದ್ದಿ : ನಾಳೆ ಮತ್ತು ನಾಡಿದ್ದು ನಡೆಯಬೇಕಿದ್ದ ಕೆಪಿಎಸ್ ಸಿ ಗ್ರೂಪ್ ಬಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೋರಡಿಸಿದೆ.
ಪರೀಕ್ಷೆ ಮುಂದೂಡಿದರಿಂದ ಪರೀಕ್ಷೆಗಾಗಿ ಹುಮ್ಮಸ್ಸಿನಿಂದ ಭರ್ಜರಿ ತಯಾರಿ ನಡೆಸುತ್ತಿದ್ದ ಅಭ್ಯರ್ಥಿಗಳಿಗೆ ತೀವ್ರ ಆಘಾತವಾಗಿದೆ. ಕೆಪಿಎಸ್‌ಸಿಯ ಈ ಕೊನೆ ಕ್ಷಣದ ಬದಲಾವಣೆಯಿಂದ ಅಭ್ಯರ್ಥಿಗಳು ಕಂಗಾಲಾಗಿದ್ದು, ಶನಿವಾರ ಕಡ್ಡಾಯ ಕನ್ನಡ, ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಯಬೇಕಿತ್ತು. ಈ ಮೊದಲು ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ಸರ್ಕಾರ ನೀಡಿತ್ತು. ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಸಲ ಅನ್ವಯವಾಗುವಂತೆ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
ಆದ್ದರಿಂದ ಸರ್ಕಾರದ ಈ ಆದೇಶದಿಂದ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ಈ ನಿಟ್ಟಿನಲ್ಲಿ KPSC ಕೈಗೊಂಡಿರುವ ಪರೀಕ್ಷೆಯನ್ನು ಮುಂದೂಡಿ ಪ್ರಕಟಣೆ ಹೊರಡಿಸಿದೆ. ಅಲ್ಲದೇ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ತಿಳಿಸಲಾಗುವುದು ಎಂದು ಕೆಪಿಎಸ್‌ಸಿ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ