ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆಯಿಂದ ಆರಂಭವಾಗಬೇಕಿದ್ದ ಕೆಪಿಎಸ್ ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಈ ಕುರಿತು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದ್ದು, ಏಪ್ರಿಲ್ 22ರಿಂದ ಏಪ್ರಿಲ್ 30ರವರೆಗೆ ನಡೆಯಬೇಕಿದ್ದ ಕೆಪಿಎಸ್ ಸಿ ದ್ವಿತೀಯ ಅಧಿವೇಶನದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ.
ಕೊರೊನಾ ನಿಯಂತ್ರಣ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡುತ್ತಿರುವುದರಿಂದ ಪರೀಕ್ಷೆ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ನಂತರದಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.
ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ; 22 ರೋಗಿಗಳು ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ