ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಶಿವಲಿಂಗ ಪಾಟೀಲ್ ಎಂದು ಗುರುತಿಸಲಾಗಿದೆ. ಈತ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿಯಗೈದ್ದು, ದಾರಿದೀಪ ಹೆಸರಿನ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಆದರೆ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನಲಾಗಿದೆ.
ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ, ಮತ್ತೋರ್ವ ಆರೋಪಿ ರಾಚಪ್ಪನಿಂದ ಪ್ರಶ್ನೆ ಪತ್ರಿಕೆ ಪಡೆದು ನೀಡುತ್ತಿದ್ದ. ಬೆಂಗಳೂರಿನ ಸಿಸಿಬಿ ಪೊಲೀಸರು ಬೆಳಗಾವಿಯಲ್ಲಿ ಈಗ ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ