Kannada NewsKarnataka NewsLatest

*ಕೆಪಿಎಸ್‌ಸಿ ಅಕ್ರಮ: CID ಮುಂದೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರು ಅಭ್ಯರ್ಥಿಗಳು*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ವಿಚಾರಣೆ ವೇಳೆ ಆರು ಅಭ್ಯರ್ಥಿಗಳು ತಪ್ಪೊಪ್ಪಿಕೊಂಡಿದ್ದಾರೆ.

ತನಿಖೆಯ ವೇಳೆ ಸುಹೇಲ್ ಸೇರಿದಂತೆ ಒಟ್ಟು 6 ಜನ ಅಭ್ಯರ್ಥಿಗಳು ಹಣ ನೀಡಿ ಅಕ್ರಮವಾಗಿ ಪರೀಕ್ಷೆ ಬರೆದಿರುವುದಾಗಿ ಸಿಐಡಿ ಮುಂದೆ ಬಾಯ್ಬಿಟ್ಟಿದ್ದಾರೆ.

400 ಹುದ್ದೆಗಳಿಗೆ ನಡೆದಿದ್ದ ಈ ನೇಮಕಾತಿ ಪರೀಕ್ಷೆಯಲ್ಲಿ, ಒಂದು ಹುದ್ದೆಗೆ ಬರೋಬ್ಬರಿ 40 ಲಕ್ಷ ರೂಪಾಯಿಗೆ ಡೀಲ್ ಕುದುರಿಸಲಾಗಿತ್ತು. ಬೆಂಗಳೂರಿನ ರಾಜಾಜಿನಗರದಲ್ಲಿದ್ದ ಕಚೇರಿಯೊಂದರಲ್ಲಿ ಈ ಡೀಲ್ ನಡೆದಿದ್ದು, ವಾಟ್ಸಾಪ್ ಮೂಲಕ ವ್ಯವಹಾರ ನಡೆಸಿ ಮುಂಗಡವಾಗಿ 20 ಲಕ್ಷ ರೂ. ಹಣ ಪಾವತಿಸಲಾಗಿತ್ತು ಎಂದು ಅಭ್ಯರ್ಥಿ ಸುಹೇಲ್ ಹೇಳಿಕೆ ನೀಡಿದ್ದಾನೆ.

ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ತಲುಪಿತ್ತು. ಅಭ್ಯರ್ಥಿಗಳು ಸಾಮಾನ್ಯ ಪರೀಕ್ಷಾ ಕೇಂದ್ರಗಳ ಬದಲಾಗಿ ಬೆಂಗಳೂರಿನ ರೆಸಾರ್ಟ್‌, ತುಮಕೂರಿನ ದೇವರಾಯನದುರ್ಗ ಹಾಗೂ ಆಂಧ್ರಪ್ರದೇಶದ ರೆಸಾರ್ಟ್‌ಗಳಲ್ಲಿ ಕುಳಿತು ಪರೀಕ್ಷೆ ಬರೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಈ ಸಮಗ್ರ ಅಕ್ರಮ ಜಾಲದಲ್ಲಿ ಮಧ್ಯವರ್ತಿ ಬಸವರಾಜ್ ಕನ್ನಾಳೆ ಸೇರಿದಂತೆ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ಅಭ್ಯರ್ಥಿಗಳು ಸಿಐಡಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button