*ಕೆಪಿಎಸ್‌ಸಿ ಹಗರಣ: ಕೊನೆಗೂ ಸಿಐಡಿ ವಿಚಾರಣೆಗೆ ಹಾಜರಾದ ಶಾಂತಾ ಹೊಸಮನಿ*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿಯ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೆಪಿಎಸ್ ಸಿ ಸದಸ್ಯೆ ಡಾ.ಶಾಂತಾ ಹೊಸಮನಿ ಕೊನೆಗೂ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಬಂಧನ ಭೀತಿಯಲ್ಲಿದ್ದ ಕೆಪಿಎಸ್‌ಸಿ ಸದಸ್ಯೆ ಡಾ.ಶಾಂತಾ ಹೊಸಮನಿ ತಲೆಮರೆಸಿಕೊಂಡಿದ್ದರು. ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ 52ನೇ ಸಿಸಿಹೆಚ್ ನ್ಯಾಯಾಲಯ ಕಳೆದ ವಾರ ವಜಾಗೊಳಿಸಿತ್ತು. ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಕೆಎಎಸ್ , ಪಶುವೈದ್ಯಾಧಿಕಾರಿ ನೇಮಕಾತಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ AEE ಹುದ್ದೆಗಳ … Continue reading *ಕೆಪಿಎಸ್‌ಸಿ ಹಗರಣ: ಕೊನೆಗೂ ಸಿಐಡಿ ವಿಚಾರಣೆಗೆ ಹಾಜರಾದ ಶಾಂತಾ ಹೊಸಮನಿ*