*ದೂರದ ಸಂಬಂಧಿ ಅಂತಾ ಅಭ್ಯರ್ಥಿಗೆ ಸಹಾಯ ಮಾಡಿದ್ದೆ ಎಂದ ಶಿವಶಂಕರಪ್ಪ ಸಾಹುಕಾರ್*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಕಸ್ಟಡಿಯಲ್ಲಿರುವ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ವಿಚಾರಣೆಯನ್ನು ಇಡಿ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ.
ಇಡಿ ಅಧಿಕಾರಿಗಳ ಮುಂದೆ ಶಿವಶಂಕರಪ್ಪ ಸಾಹುಕಾರ್ ತಪ್ಪೊಪ್ಪಿಕೊಂಡಿದ್ದಾರೆ. ಅಭ್ಯರ್ಥಿಗೆ ದೂರದ ಸಂಬಂಧಿ ಅಂತ ಸಹಾಯ ಮಾಡಿದ್ದೇನೆ ಅಷ್ಟೇ. ಹಣ ಸಂಪಾದನೆ ಮಾಡುವ ಯಾವುದೇ ದುರುದ್ದೇಶ ಇರಲಿಲ್ಲ. ಮೊದಲ ಹಂತದಲ್ಲಿ ಕೇಳಿದ್ದು 50 ಲಕ್ಷ ರೂ. ಕೊನೆಗೆ 20 ಕ್ಕೆ ಒಪ್ಪಿಕೊಂಡಿದ್ದೆ. 10 ಲಕ್ಷ ಮುಂಗಡ ಹಣವನ್ನು ಪಡೆದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಶಿವಶಂಕರಪ್ಪ ಸಾಹುಕಾರ್ ಇಡಿ ಅಧಿಕಾಅರಿಗಳ್ ಅಮುಂದೆ ಹಗರಣದ ಬಗ್ಗೆ ಎಲ್ಲಾ ಮಾಹಿತಿ ಬಾಯ್ಬಿಡುತ್ತಿದ್ದಾರೆ. ಆದರೆ ಸದಸ್ಯೆ ಗೀತಾ ಮಾತ್ರ ಏನನ್ನೂ ಬಾಯ್ಬಿಡುತ್ತಿಲ್ಲ. ಈ ವ್ಯವಹಾರಕ್ಕೂ, ಹಗರಣಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



