
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೆಪಿಎಸ್ಸಿ ಹಗರಣ ಪ್ರಕರಣ ಸಂಬಂಧ 2ನೇ ಬಾರಿಗೆ ಶಿವಶಂಕರಪ್ಪ ಸಾಹುಕಾರ್ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಅವರನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಸಾಹುಕಾರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಇದೇ ಪ್ರಕರಣದಲ್ಲಿ ಕೆಪಿಎಸ್ಸಿ ಸದಸ್ಯೆ ಗೀತಾ ಅವರನ್ನು ಕೂಡ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಅಭ್ಯರ್ಥಿಗಳ ಜೊತೆ ನೇರ ಸಂಪರ್ಕ ಹೊಂದಿದ್ದ ಆರೋಪ ಇವರ ಮೇಲಿತ್ತು. ಶಿವಶಂಕರಪ್ಪ ಸಂಬಂಧಿ ಸುಗುರೇಶ್ ಜಾಕಾ ತಪ್ಪೊಪ್ಪಿಗೆ ಮತ್ತು ಐಎ ಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಹೇಳಿಕೆ ಆಧರಿಸಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

