
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಸದಸ್ಯೆ ಬಿ.ವಿ.ಗೀತಾಅ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಗೀತಾ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕೆಪಿಎಸ್ ಸಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಡಾಲರ್ಸ್ ಕಾಲೋನಿ ಮನೆ ಮೇಲೆ ಎರಡನೇ ಬಾರಿ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಇದೇ ವೇಳೆ ಕೆಪಿಎಸ್ ಸಿ ಸದಸ್ಯೆ ಗೀತಾ ಅವರ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ಗೀತಾ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ಈಗಾಗಲೇ ಇಡಿಯಿಂದ ಬಂಧಿಸಲ್ಪಟ್ಟಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿಚಾರಣೆ ವೇಳೆ ಶಿವಶಮ್ಕರಪ್ಪ ಸಾಹುಕಾರ್, ಬಿ.ವಿ.ಗೀತಾ, ಶಾಂತಾ ಹೊಸಮನಿ, ಡಾಲ್ಪಿಯಾ ಈ ನಾಲ್ವರ ಹೆಸರು ಬಾಯ್ಬಿಟ್ಟಿದ್ದ. ಇದೇ ಕಾರಣಕ್ಕೆ ಇಡಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




