Kannada NewsKarnataka NewsLatest

*BREAKING: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಪಿಎಸ್‌ಸಿ ಹಗರಣದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಭಾಗಿಯಾಗಿರುವ ಆರೋಪದಲ್ಲಿ ಸಿಐಡಿ ಅಧಿಕಾರಿಗಳು ಅವರನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದಾರೆ. ಸಿಐಡಿ ಕಸ್ಟಡಿಯಲ್ಲಿರುವ ಅಧಿಕಾರಿಯನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಹಗರಣ ಬೆಳಕಿಗೆ ಬರುತ್ತಿದ್ದಂತೆ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದರು. ಬಳಿಕ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

ಕೋರ್ಟ್ ಗೆ ಹಾಜರುಪಡಿಸಿದ್ದ ವೇಳೆ ನ್ಯಾಯಾಲಯ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು. ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ ಹಾಗೂ ಸಿಐಡಿ ಅಧಿಕಾರಿಗಳ ದಾಳಿ ವೇಳೆ ಕೆಲ ಪುರಾವೆಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರನ್ನು ಅಮಾನತುಗೊಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button