Kannada NewsLatestPolitics

*ಹೊಸ ಬಾಂಬ್ ಸಿಡಿಸಿದ ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಹಗರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಕೆಟ್ ಪತನವಾಗಲಿದೆ. ಅವರ ರಾಜೀನಾಮೆಯಾಗಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾತನಾಡಿದ ಆರ್.ಅಶೋಕ್, ವಾಲ್ಮೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ರಾಜೀನಾಮೆ ಬಳಿಕ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಲಿದೆ. ಕೆಪಿಎಸ್‌ಸಿ ಹಗರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಯಾಗುತ್ತೆ ಎಂದರು.

Home add -Advt

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಬರ, ಕೆಪಿಎಸ್ ಸಿ ಹಗರಣ ಸೇರಿದಂತೆ ಹಲವು ವಿಚಾರಗಳನ್ನಿಟ್ಟು ಕೊಂಡು ಪಾದಯಾತ್ರೆ ಮಾಡ್ತಿದ್ದೇವೆ. ವಾಲ್ಮೀಕಿ ಹಗರಣದಲ್ಲಿ ಈಗಾಗಲೇ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಸದನದಲ್ಲಿ ಹೋರಾಟ ಮಾಡಿದ್ದೇವೆ. ಈ ಕಾರಣಕ್ಕೆ ಇವತ್ತು ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ವಾಲ್ಮೀಕಿ ನಿಗಮದ ಹಣ ಬಡವರಿಗೆ ಸೇರಬೇಕು. ಅಲ್ಲಿವರೆಗೂ ನಾವು ಹೋರಾಟ ಮಾಡ್ತೆವೆ ಎಂದರು.

ಬಸವರಾಜ ರಾಯರೆಡ್ಡಿ ಇಸ್ಲಾಂ ಧರ್ಮದ ಪರ ಇದ್ದಾರೆ. ಉಳಿದ ಧರ್ಮಗಳು, ಧರ್ಮಗಳೆ ಅಲ್ವಾ? ಬಸವರಾಜ ರಾಯರೆಡ್ಡಿ ಕೂಡ ಸಂಪುಟದಲ್ಲಿರಲು ಅರ್ಹರಲ್ಲ. ಬಸವರಾಜ್ ರಾಯರೆಡ್ಡಿ ರಾಜೀನಾಮೆ ನೀಡಬೇಕು. ಇಲ್ಲಾ ಕಾಂಗ್ರೆಸ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.


Related Articles

Back to top button