Kannada NewsKarnataka NewsLatest

*ಶಿವಶಂಕರಪ್ಪ ಸಾಹುಕಾರ್ ಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸುವಂತೆ ರಾಜ್ಯ ಸಚಿವ ಸಂಪುಟ ಸಭೆ ರಾಜ್ಯಪಾಲರಿಗೆ ಅಧಿಕೃತವಾಗಿ ಶಿಫಾರಸು ಮಾಡಿದೆ.

ಈ ಹಿಂದೆ ಕೆಪಿಎಸ್ ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದುಗಿಳಿಸಿತ್ತಲ್ಲದೇ ಶಿವಶಂಕರಪ್ಪ ಅವರನ್ನು ಕೆಪಿಎಸ್ ಸಿ ಅಧ್ಯಕ್ಷರನ್ನಾಗಿ ಮರುನೇಮಕ ಅಮಾಡುವಂತೆ ಸೂಚಿಸಿತ್ತು.

ಈ ಬೆಳವಣಿಗೆ ಬೆನ್ನಲ್ಲೇ ಇಂದು ನಡೆದ ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ಶಿಫಾರಸು ಹೊರಡಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button