
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಲೊಕಸೇವಾ ಆಯೋಗ-ಕೆ.ಪಿ.ಎಸ್.ಸಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷ ನೇಮಕಾತಿ ಪ್ರಕ್ರಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಸೂಚನೆ ಬೆನ್ನಲ್ಲೇ ರಾಜ್ಯ ಸರ್ಕಾರ ಕೆಪಿಎಸ್ ಸಿ ಸದಸ್ಯರ ಹುದ್ದೆಗೆ ಮೂವರ ಹೆಸರನ್ನು ಶಿಫಾರಸು ಮಾಡಲಾಗಿದೆ.
ಬೀದರ್ ನ ಬಸವರಾಜ್ ಮಲ್ಗೆ, ಬೆಂಗಳೂರಿನ ಡಾ.ಆರ್.ಕಾವಾಲಮ್ಮ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಮಾಜಿ ರಿಜಿಸ್ಟ್ರಾರ್ ಡಾ.ಹೆಚ್.ಎಸ್.ಭೋಜ್ಯನಾಯ್ಕ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಶಿಫಾರಸು ಮಾಡಿದ್ದಾರೆ.
ಕಳೆದ ಎರಡು ವಾರಗಳ ಹಿದಷ್ಟೇ ಹೈಕೋರ್ಟ್, ಕೆಪಿಎಸ್ ಸಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಲ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ