ಪ್ರಗತಿವಾಹಿನಿ ಸುದ್ದಿ: ಸದಾ ಒಂದಿಲ್ಲೊಂದು ವಿವಾದಗಳಲ್ಲೇ ಮುಳುಗಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಇದೀಗ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿದೆ.
ಕೆಪಿಎಸ್ ಸಿ ನೇಮಕಾತಿ ಆಯ್ಕೆ ಪಟ್ಟಿ ನಾಪತ್ತೆಯಾಗಿರುವ ಬಗ್ಗೆ ಅಧಿಕಾರಿಗಳು ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಇಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿ ಕಡತ ನಾಪತ್ತೆಯಾಗಿದೆ. 2016ರಲ್ಲಿ ಕೊಳಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆ ನಡೆದಿತ್ತು. 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಹೆಚ್.ಡಿ.ವಿವೇಕಾನಂದ ಎಂಬುವವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಆದೇಶದಂತೆ ಆಯ್ಕೆ ಪಟ್ಟಿ ತಯಾರಾಗಿತ್ತು. ಜ.22ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರ ಮಾಡಲಾಗಿತ್ತು. ಆ ಬಳಿಕ ಕಡತ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ