ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಗೋಕಾಕ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಗೋಕಾಕ ತಾಲೂಕಿನ ಲೋಳಸೂರದ ಯಲ್ಲಪ್ಪ ಮಹಾದೇವ ರಕ್ಷಿ (26) ಹಾಗೂ ಚಿಕ್ಕೋಡಿ ತಾಲೂಕಿನ ಜಾಗನೂರಿನ ನಾಗಪ್ಪ ಶಿವಪ್ಪ ದೊಡ್ಮನಿ ( 27) ಬಂಧಿತ ಆರೋಪಿಗಳು.
ಇವರ ಪೈಕಿ ಯಲ್ಲಪ್ಪ ಪರೀಕ್ಷೆ ಬರೆಯುವ ಅಭ್ಯರ್ಥಿಗೆ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸಿದ್ದಾನೆ. ಮತ್ತು ಶಿರಹಟ್ಟಿಯಲ್ಲಿ ಕುಳಿತು ಪ್ರಶ್ನೆ ಪತ್ರಿಕೆಗೆ ಉತ್ತರ ಹೇಳಿದ್ದಾನೆ. ಈತನಿಂದ ಒಂದು ಮೊಬೈಲ್ ಹಾಗೂ ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇನ್ನು, ಆರೋಪಿ ನಾಗಪ್ಪ ಎಲೆಕ್ಟ್ರಾನಿಕ್ ಡಿವೈಸ್ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದ ಅಭ್ಯರ್ಥಿಯಾಗಿದ್ದಾನೆ. ಈತನಿಂದ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಒಂದು ಮೊಬೈಲನ್ನು ಪೊಲೀಸರು ಜಫ್ತಿ ಮಾಡಿದ್ದಾರೆ.
ಇಬ್ಬರೂ ಆರೋಪಿಗಳನ್ನು ಗೋಕಾಕದ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆಎಂ ಎಫ್ ಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಬೆಳಗಾವಿ ಎಸ್ ಪಿ ಡಾ. ಸಂಜೀವ ಪಾಟೀಲ ತಿಳಿಸಿದ್ದಾರೆ.
KPTCL ನೇಮಕಾತಿ ಅಕ್ರಮ; ಕಿಂಗ್ ಪಿನ್ ಸೇರಿ 20 ಆರೋಪಿಗಳಿಗೆ ಜಾಮೀನು
1.20 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ; ಮೂವರು ವಿದ್ಯಾರ್ಥಿಗಳ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ