Latest

*ಕೆಪಿಟಿಸಿಎಲ್ ಎಇ ಹಾಗೂ ಜೆಇ ಹುದ್ದೆಗೆ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ*

ಪ್ರಗತಿವಾಹಿನಿ ಸುದ್ದಿ: ಮೇ 8, 2024 ರಂದು ಪ್ರಕಟಗೊಂಡಿದ್ದ ಕೆಪಿಟಿಸಿಎಲ್ ಎಇ ಹಾಗೂ ಜೆಇ ಹುದ್ದೆಗಳ ಆಯ್ಕೆಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ನೆಗೆಟಿವ್‌ ಮಾರ್ಕಿಂಗ್ ಕುರಿತಂತೆ ಹಲವಾರು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ಕುರಿತು ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ. ವಿ. ಅರವಿಂದ್ ಅವರಿದ್ದ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

ಫೆಬ್ರವರಿ 18, 2024 ರಂದು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಕೆಪಿಟಿಸಿಎಲ್‌ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಜೊತೆಗೆ ನೆಗೆಟಿವ್‌ ಮಾರ್ಕಿಂಗ್ ಕುರಿತು ಪೂರ್ವ ಮಾಹಿತಿ ನೀಡುವಂತೆ ಸೂಚನೆ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button