Latest

ಕೆಪಿಟಿಸಿಎಲ್ 1492 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಟಿಸಿಎಲ್ (ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ 1492 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಫೆಬ್ರವರಿ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಫೆ.28ರ ಒಳಗೆ ಅರ್ಜಿ ಸಲ್ಲಿಸಬೇಕು.

Home add -Advt

ಜೂನಿಯರ್ ಇಂಜಿನಿಯರ್ – 599 ಜೂನಿಯರ್ ಅಸಿಸ್ಟೆಂಟ್ – 360 ಸಹಾಯಕ ಇಂಜಿನಿಯರ್ – 533 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ಸ್ಟ್ರೀಮ್‌ನಲ್ಲಿ ಡಿಪ್ಲೊಮಾ ಅಥವಾ ಪದವಿಯನ್ನು ಹೊಂದಿರಬೇಕು. ಹೆಚ್ಚಿನ ಶೈಕ್ಷಣಿಕ ಅರ್ಹತೆ ಮತ್ತು ಈ ನೇಮಕಾತಿಗೆ ಸಂಬಂಧಿಸಿದ ಇತರ ಮಾಹಿತಿಗಾಗಿ, ಅಭ್ಯರ್ಥಿಗಳು ಅಧಿಸೂಚನೆಯನ್ನು ಪರಿಶೀಲಿಸಬಹುದು.

ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 35 ವರ್ಷಗಳ ನಡುವೆ ಇರಬೇಕು. ಅರ್ಜಿ ಸಲ್ಲಿಸುವವರು ಹೆಚ್ಚಿನ ಮಾಹಿತಿಗಾಗಿ kptcl.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ.
ನವೋದಯ ವಿದ್ಯಾಲಯ ಸಮಿತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Related Articles

Back to top button