*ಜ.19 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ ಮತ್ತು ಪ್ರತಿಮೆ ಲೋಕಾರ್ಪಣೆ ಸಮಾರಂಭ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ, ಸಮಾಧಿ ಬಳಿಯ ಕೆರೆಯಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಸಮಾರಂಭ ಹಾಗೂ ವಿವಿಧ ಕಾಮಗಾರಿಗಳ ಭೂಮಿ ಪೂಜೆ ಕಾರ್ಯಕ್ರಮವು ನಂದಗಡದ ನಂದಗಡ ರೂರಲ್ ಎಜುಕೇಷನ್ ಸೊಸೈಟಿ ಮೈದಾನದಲ್ಲಿ ಜನೇವರಿ 19 (ಸೋಮವಾರ) ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ.
ಶ್ರೀ ಕ್ಷೇತ್ರ ಕಾಗಿನೆಲೆ ಕನಕ ಗುರುಪೀಠದ ಶ್ರೀ. ರೇವಣಸಿದ್ದೇಶ್ವರ ಸಿಂಹಾಸನಾಧೀಶ್ವರ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರಂಜನಾನಂದಪುರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ನಗರಾಭಿವೃದ್ಧಿ ಸಚಿವರಾದ ಭೈರತಿ ಎಸ್.ಸುರೇಶ ಅವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು ಶಾಸಕಾರ ವಿಠಲ ಹಲಗೇಕರ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ. ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ನವದೆಹಲಿ ಪ್ರಕಾಶ ಹುಕ್ಕೇರಿ, ವಾಯುವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರಾದ ಭರಮಗೌಡ ಕಾಗೆ, ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ ಅವರುಗಳು ವಿಶೇಷ ಆಮಂತ್ರಿತರಾಗಿ, ಜಿಲ್ಲೆಯ ವಿಧಾನ ಸಭೆ, ವಿಧಾನ ಪರಿಷತ್ ಶಾಸಕರುಗಳು ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ.



