
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್ ) ದಿಂದ ಬಾಕಿ ಬಿಲ್ ಪಾವತಿ ಮಾಡಿಲ್ಲ ಎಂದು ಮನನೊಂದು ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನಲ್ಲಿ ನಡೆದಿದೆ.
ಪಿ.ಎಸ್.ಗೌಡರ್ (48) ಆತ್ಮಹತ್ಯೆ ಗೆ ಶರಣಾದವರು. ಪಿ.ಎಸ್.ಗೌಡರ್ ಕೆ.ಆರ್.ಐ.ಡಿ.ಎಲ್ ನಡಿ ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ 2023-24ರಲ್ಲಿ ಕಾಮಗಾರಿ ಮಾಡಿದ್ದರು. ಇದಕ್ಕೆ ಬಾಕಿ ಬಿಲ್ ಪಾವತಿ ಮಾಡದೇ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾರೆ.
ಅಲ್ಲದೇ ತನ್ನ ಇಬ್ಬರು ಸಹೋದರ ವಿರುದ್ಧವೂ ದೂರಿದ್ದು, ಹಣಕಾಸಿನ ವಿಚಾರವಾಗಿ ಸಹೋದರರು ತನಗೆ ಮೋಸ ಮಾಡಿದ್ದಾರೆ. ಅಧಿಕಾರಿಗಳು ಹಗೂ ಸಹೋದರರ ವರ್ತನೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.