*ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್ ) ದಿಂದ ಬಾಕಿ ಬಿಲ್ ಪಾವತಿ ಮಾಡಿಲ್ಲ ಎಂದು ಮನನೊಂದು ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನಲ್ಲಿ ನಡೆದಿದೆ. ಪಿ.ಎಸ್.ಗೌಡರ್ (48) ಆತ್ಮಹತ್ಯೆ ಗೆ ಶರಣಾದವರು. ಪಿ.ಎಸ್.ಗೌಡರ್ ಕೆ.ಆರ್.ಐ.ಡಿ.ಎಲ್ ನಡಿ ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ 2023-24ರಲ್ಲಿ ಕಾಮಗಾರಿ ಮಾಡಿದ್ದರು. ಇದಕ್ಕೆ ಬಾಕಿ ಬಿಲ್ ಪಾವತಿ ಮಾಡದೇ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾರೆ. … Continue reading *ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆ*