Belagavi NewsBelgaum NewsKannada NewsKarnataka NewsLatest
*BREAKING: ಬೆಳಗಾವಿ: ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಮೃಗಾಲಯದಲ್ಲಿ ಕೃಷ್ಣಮೃಗಗಳ ನಿಗೂಢ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಭೂತರಾಯನಹಟ್ಟಿ ಬಳಿಯ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ನವೆಂಬರ್ 13 ರಂದು 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದ್ದು ಆತಂಕ ಮೂಡಿಸಿದೆ. ಮೃಗಾಲಯದಲ್ಲಿರುವ ಉಳಿದ 9 ಕೃಷ್ಣಮೃಗಗಳಿಗೆ ಚಿಕಿತ್ಸೆ ನೀಡಿ ಜಾಗರೂಕತೆಯಿಂದ ನೋಡಿಕೊಳ್ಳಲಾಗುತ್ತಿದೆ.
ಮತ್ತೊಂದೆಡೆ ಬೆಂಗಳೂರಿನ ಬನ್ನೇರುಘಟ್ಟ ಪಶು ವಿಜ್ಞಾನ ವಿದ್ಯಾಲಯದ ತಜ್ಞ ವೈದ್ಯರು ಮೃಗಾಲಯಕ್ಕೆ ಭೇಟಿ ನೀಡಿ ಮೃತ ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ವರದಿ ಬಂದ ಬಳಿಕ ಕೃಷ್ಣಮೃಗಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




