Karnataka News

*ರಾಜ್ಯದಲ್ಲಿ ರಾಜಸ್ವ ಸಂಗ್ರಹ ಹೆಚ್ಚಳ: ಸಚಿವ ಕೃಷ್ಣ ಬೈರೇಗೌಡ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ 15,145.32 ಕೋಟಿಗಳಷ್ಟು ರಾಜಸ್ವ ಸಂಗ್ರಹಣೆ ಆಗಿದ್ದು,ಈ ಬಾರಿ ಕಳೆದ ಸಾಲಿಗಿಂತ ಹೆಚ್ಚು ರಾಜಸ್ವ ಸಂಗ್ರಹಣೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಪ್ರಸಕ್ತ ಸಾಲಿನಲ್ಲಿ ರಾಜಸ್ವ ಸಂಗ್ರಹಣೆಯಲ್ಲಿ ಕಳೆದ ಸಾಲಿಗಿಂತ ಶೇ. 20 ರಷ್ಟು ಹೆಚ್ಚು ಸಂಗ್ರಹದ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.

Home add -Advt

ರಾಜ್ಯದಲ್ಲಿ ಭೌತಿಕ ಖಾತೆ ಬಳಸಿ ನೋಂದಣಿ ಮಾಡುತ್ತಿದ್ದ ಸಂದರ್ಭದಲ್ಲಿ ಸುಳ್ಳು ಗುರುತಿನ ಚೀಟಿ ಸೃಷ್ಟಿಸಿಕೊಂಡು, ಸುಳ್ಳು PID ಸಂಖ್ಯೆ ಸೃಷ್ಟಿಸಿ ಸರ್ಕಾರಿ ಆಸ್ತಿ, ಅಮಾಯಕರ ಆಸ್ತಿಗಳನ್ನು ಬೇರೊಬ್ಬರ ಹೆಸರಿಗೆ ನೋಂದಣಿಯಾಗುತ್ತಿದ್ದ Impersonation, ವಂಚನೆ ನೊಂದಣಿಗಳನ್ನು ಪ್ರಕರಣಗಳನ್ನು, ನೋಂದಣಿ ಮತ್ತು ಮುದ್ರಾಂಕ ಶುಲ್ಕ ವಂಚನೆಯನ್ನು ಹಾಗೂ ಕಾನೂನುಬದ್ಧವಲ್ಲದ ನೋಂದಣಿಗಳನ್ನು ತಡೆಗಟ್ಟಲಾಗಿದೆ.

ಇ-ಖಾತಾ ಸಂಯೋಜನೆಯ ನಂತರ ಕಾನೂನು ಬಾಹಿರ ಮತ್ತು ಬೊಟ್ಟಿ ದಾಖಲೆಗಳನ್ನು ಸೃಷ್ಟಿಸಿಕೊಂಡು ನೋಂದಣಿ ಮಾಡಿಸಿಕೊಳ್ಳುತ್ತಿದ್ದ ದಸ್ತಾವೇಜುಗಳ ಸಂಖ್ಯೆ ಕಡಿಮೆಯಾಗಿದ್ದು, ಕಾನೂನು ಬದ್ದವಾಗಿ ನೈಜವಾದ ಆಸ್ತಿ ನೋಂದಣಿಯಿಂದ ಸರ್ಕಾರಕ್ಕೆ ಯಾವುದೇ ಆದಾಯ ನಷ್ಟ ಉಂಟಾಗಿರುವುದಿಲ್ಲ ಎಂದು ತಿಳಿಸಿದರು.

Related Articles

Back to top button