ಪ್ರಗತಿವಾಹಿನಿ ಸುದ್ದಿ: ತುಂಬಿ ಹರಿಯುತ್ತಿದ್ದ ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ.
ರಾಯಬಾಗ ತಾಲುಕಿನ ಬಾವನಸೌಂದತ್ತಿ ಗ್ರಾಮದ ಸಂಬಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದವರು. ಅಂಕಲಿ-ನಸಲಾಪುರ ಗ್ರಾಮದ ಸೇತುವೆಯಿಂದ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಂಕಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹ ಹೊರತೆಗೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ