Kannada NewsKarnataka NewsLatest
*ಪ್ರವಾಸಕ್ಕೆ ಹೋಗಿದ್ದಾಗ ದುರಂತ: ಕೆ.ಆರ್.ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ವರುಣಾರ್ಭಟಕ್ಕೆ ರಾಜ್ಯದಲ್ಲಿ ಸಾಲು ಸಾಲು ದುರಂತಗಳು ಸಂಭವಿಸುತ್ತಿವೆ. ಮಳೆ ಅಬ್ಬರದ ನಡುವೆಯೇ ಕೆ.ಆರ್.ಎಸ್ ಹಿನ್ನೀರಿಗೆ ಪ್ರವಾಸಕ್ಕೆಂದು ಹೋಗಿದ್ದ ವಿದ್ಯಾರ್ಥಿಗಳು ನೀರುಪಾಲಗಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ತಾಲೂಕಿನ ಮೀನಾಕ್ಷಿಪುರದ ಬಳಿ ಕೆ.ಆರ್.ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಾದ ಪ್ರಶಾಂತ್, ಸಿದ್ದೇಶ್ ಹಾಗೂ ಕೃಷ್ಣ ಮೃತರು.
ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಕೆ.ಆರ್.ಎಸ್ ಹಿನ್ನೀರಿನಲ್ಲಿ ಮುಳುಗಿದ್ದ ಮೂವರು ವಿದ್ಯಾರ್ಥಿಗಳ ಮೃತದೇಹ ಹೊರತೆಗೆದಿದ್ದಾರೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.