ಪ್ರಗತಿವಾಹಿನಿ ಸುದ್ದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆ.ಆರ್.ಎಸ್ ಡ್ಯಾಂ ಭರ್ತಿಯಾಗಿದೆ. ಒಂದುವರೆ ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದ್ದು, ಜೀವನದಿ ಕಾವೇರಿ ತುಂಬಿ ಹರಿಯುತ್ತಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕಾವೇರಿ ನದಿಗೆ ಬಾಗಿನ ಅರ್ಪಿಸಿದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲುಕಿನ ಕೆ.ಆರ್.ಎಸ್ ಜಲಾಶಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೂರನೇ ಬಾರಿಗೆ ಕಾವೇರಿ ನದಿಗೆ ಬಾಗಿನ ಅರ್ಪಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ, ಹೆಚ್.ಸಿ .ಮಹದೇವಪ್ಪ ಕೂಡ ಬಾಗಿನ ಅರ್ಪಿಸಿದರು.
ಈ ವೇಳೆ ಜಲಾಶಯಕ್ಕೆ ಕ್ಷೀರಾಭೀಷೇಕ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳು, ಕಾವೇರಿ ನಗಮದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ