Kannada NewsKarnataka NewsLatest

ಸುವರ್ಣವಿಧಾನಸೌಧಕ್ಕೆ ಕಚೇರಿಗಳ ಸ್ಥಳಾಂತರ: ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯನ್ನು ಎರಡನೇ ರಾಜಧಾನಿಯನ್ನಾಗಿ ಘೋಷಿಸಬೇಕೆಂಬ ಉದ್ದೇಶದಿಂದಲೇ 500 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾದ ಸುವರ್ಣ  ವಿಧಾನಸೌಧವನ್ನು ” ಬೆಳಗಾವಿ ಜಿಲ್ಲಾಡಳಿತ ಭವನವನ್ನಾಗಿಸುವ” ಪ್ರಯತ್ನದ ವಿರುದ್ಧ ಕನ್ನಡ ಸಂಘಟನೆಗಳು ಪ್ರತಿಭಟನೆ ಆರಂಭಿಸಿವೆ.
 ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣ ಗೌಡ ಬಣ) ಪದಾಧಿಕಾರಿಗಳು ಮತ್ತು ಕಾರ್ಯಕರ್ತರು  ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ತೀವ್ರ ಪ್ರತಿಭಟನೆ ನಡೆಸಿದರಲ್ಲದೇ ರಾಜ್ಯ  ಮಟ್ಟದ ಕಚೇರಿಗಳನ್ನು ಮಾತ್ರ ಸುವರ್ಣ ಸೌಧಕ್ಕೆ ಸ್ಥಳಾಂತರಿಸಬೇಕೆಂದು ಆಗ್ರಹಿಸಿದರು.
 ಮೂರು ತಿಂಗಳಿಗೊಮ್ಮೆ ಸುವರ್ಣ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟದ ಸಭೆ ನಡೆಸಬೇಕು. ಸುವರ್ಣ ವಿಧಾನಸೌಧದ ಎದುರು ವೀರರಾಣಿ ಕಿತ್ತೂರು ಚೆನ್ನಮ್ಮ, ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗಳನ್ನು ಸ್ಥಾಪಿಸಬೇಕೆಂದು ಒತ್ತಾಯಿಸಲಾಯಿತು.
 ವೇದಿಕೆಯ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ  ಅಶೋಕ ದುಡಗುಂಟಿ ಅವರಿಗೆ ಮನವಿ ಸಲ್ಲಿಸಲಾಯಿತು.
 ಜಿಲ್ಲಾಡಳಿತದ ನಿರ್ಧಾರವನ್ನು ಕೂಡಲೇ ಸ್ಥಗಿತಗೊಳಿಸುವಂತೆ ಮತ್ತು ರಾಜ್ಯ ಮಟ್ಟದ ಕಚೇರಿಗಳ ಸ್ಥಳಾಂತರದ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವಂತೆ ಆಗ್ರಹಿಸಲು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೆಟ್ಟಿಯಾಗಲು ಕನ್ನಡ ಸಂಘಟನೆಗಳು  ನಿರ್ಧರಿಸಿವೆ.
ಈ ವಿಷಯ ಕುರಿತು ಮೊಟ್ಟ ಮೊದಲ ಬಾರಿಗೆ ಪ್ರಗತಿವಾಹಿನಿ ಪ್ರಕಟಿಸಿದ್ದ ವರದಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button