ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಗೋಕಾಕ ತಾಲೂಕಿನ ಘಟಪ್ರಭಾದ ಜಯಶ್ರೀ ಮಲ್ಲಪ್ಪಾ ಸೋಲೊನಿ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ (ಸಂತೋಷ ಅರಳಿಕಟ್ಟಿ ಬಣ)ದ ರಾಜಾಧ್ಯಕ್ಷ ಸಂತೋಷ ಅರಳಿಕಟ್ಟಿ ಈ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲಾ ಘಟಕದ ಸಭೆಯು ಸಂಘಟನೆಯ ಕಾರ್ಯಲಯದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ರಾಜಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ದಯಾನಂದ ಪಾಟೀಲ, ಕಾಗವಾಡ ತಾಲೂಕಾ ಅಧ್ಯಕ್ಷ ಬಸವರಾಜ ತೇಲಿ ಅಥಣಿ ತಾಲೂಕಾ ಅಧ್ಯಕ್ಷ ಶ್ರೀಶೈಲ ಬನಟ್ಟಿ, ಚಿಕ್ಕೋಡಿ ತಾಲೂಕಾ ಅಧ್ಯಕ್ಷ ಮಂಜುನಾಥ ಹುದಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ