ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಚಿವ, ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಳಿಕ ಇದೀಗ ಬಿಜೆಪಿಯ ಇನ್ನೋರ್ವ ಹಿರಿಯ ನಾಯಕರಾಗಿರುವ ಮಾಜಿ ಸಚಿವ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಅಚ್ಚರಿಗೆ ಕಾರಣವಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ ನಾನು ಚುನಾವಣೆ ರಾಜಕೀಯದಿಂದ ನಿವೃತ್ತಿ ಪಡೆಯಲು ಇಚ್ಛಿಸಿದ್ದು, ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿಗೆ ನಿರ್ಧರಿಸಿದ್ದು, ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ವಿಧಾನಸಭಾ ಚುನಾವಣೆಗೆ ಯಾವುದೇ ಕ್ಷೇತ್ರಕ್ಕೆ ನನ್ನ ಹೆಸರನ್ನು ಪರಿಗಣಿಸಬಾರದು ಎಂದು ವಿನಂತಿ.
ಕಳೆದ 40 ವರ್ಷಗಳಿಂದ ನನಗೆ ಬಿಜೆಪಿಯಲ್ಲಿ ಅನೇಕ ಸ್ಥಾನಮಾನ, ಜವಾಬ್ದಾರಿಗಳನ್ನು ನೀಡಲಾಗಿದೆ. ಅದಕ್ಕಾಗಿ ಬಿಜೆಪಿಗೆ ಧನ್ಯವಾದಗಳು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ