Sports

*KSCA ಕಾರ್ಯದರ್ಶಿ, ಖಜಾಂಚಿ ದಿಢೀರ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಇದೀಗ ಕೆ ಎಸ್ ಸಿಎ (ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್) ಕಾರ್ಯದರ್ಶಿ ಹಾಗೂ ಖಜಾಂಚಿ ಇಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಘಟನೆ ಸಂಬಂಧ ನೈತಿಕ ಹೊಣೆ ಹೊತ್ತು ಕೆ ಎಸ್ ಸಿಎ ಕಾರ್ಯದರ್ಶಿ ಸ್ಥಾನಕ್ಕೆ ಶಂಕರ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೆ ಎಸ್ ಸಿಎ ಖಜಾಂಚಿ ಜೈಯರಾಮ್ ಕೂಡ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button