ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಡಿ.ಎಲ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ.
ಅಮೃ ಶಿರೂರ್ (40) ಆತ್ಮಹತ್ಯೆಗೆ ಶರಣಾದವರು. ಕೈಯಲ್ಲಿ ಡೆತ್ ನೋಟ್ ಹಿಡಿದುಕೊಂಡೇ ಅಮೃತ್ ಶಿರೂರ್ ನೇಣಿಗೆ ಕೊರಳೊಡ್ದಿದ್ದಾರೆ.
ಅಮೃತ್ ಶಿರೂರ್ 2019ರಲ್ಲಿ ಎರಡನೇ ವಿವಾಹವಾಗಿದ್ದರು. ಎರಡನೇ ವಿವಾಹವಾಗಿದ್ದರೂ ಪತಿ-ಪತ್ನಿ ನಡುವೆ ಜಗಳವಾಗುತ್ತಿತ್ತು. ಮೊದಲ ಮದುವೆಯ ಡಿವೋರ್ಸ್ ವಿಚಾರವಾಗಿಯೂ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಅಮೃತ್ ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ನಾನು ತಂದೆ-ತಾಯಿಗೆ ಒಳ್ಳೆಯ ಮಗನಾಗಲಿಲ್ಲ, ಪತ್ನಿಗೆ ಒಳ್ಳೆಯ ಪತಿಯೂ ಆಗಲಿಲ್ಲ. ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದಾರೆ.
ಅಮೃತ್ ಶಿರೂರ್ ತಮ್ಮ ಬಾಡಿಗೆ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ. ಎರಡು ದಿನಗಳಿಂದ ಮನೆಯಿಂದ ಆಚೆ ಬಾರದ ಕಾರಣಕ್ಕೆ ಮನೆಯ ಮಾಲೀಕರು ಮನೆಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಮಹಾಲಕ್ಷ್ಮೀ ಠಾಣೆ ಪೊಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ