Kannada NewsKarnataka NewsLatest

*ಕೆ.ಎಸ್.ಡಿ.ಎಲ್: ಸರಕಾರಕ್ಕೆ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ*

ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಟ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು.

ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು.

ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

ಸಚಿವ ಎಂ.ಬಿ.ಪಾಟೀಲ್ ಅವರು ಮಾತನಾಡಿ, ಕೆಎಸ್ಡಿಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ 1,700 ಕೋಟಿ ರೂಪಾಯಿ ವಹಿವಾಟು ನಡೆಸಿ, 451 ಕೋಟಿ ರೂ. ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.

Home add -Advt

2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ 54 ಕೋಟಿ ರೂಪಾಯಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ 108 ಕೋಟಿ ರೂ. ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ 27 ಕೋಟಿ ರೂ. ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಅವರು ನುಡಿದಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

KSDL Hands Over ₹135 Crore Dividend to Government

Bengaluru: The public sector enterprise Karnataka Soaps and Detergents Limited (KSDL) on Friday handed over ₹135 crore to the State Government as dividend from its profits for the financial year 2024–25.

On behalf of the public limited, Large and Medium Industries Minister M. B. Patil and KSDL Chairman Appaji Nadagouda presented the cheque to Chief Minister Siddaramaiah at the Conference Hall of Vidhana Soudha.

Speaking on the occasion, Mr Patil said that KSDL had achieved a turnover of ₹1,700 crore and recorded a profit of ₹451 crore in the last financial year. In line with regulations, 30 per cent of the profit has been paid to the government as dividend. “This marks an all-time record for the company in terms of turnover, profit, and dividend,” he remarked.

In 2022–23, KSDL had paid a dividend of ₹54 crore to the State Government, followed by ₹108 crore in 2023–24. Compared with last year, this year’s dividend reflects an increase of ₹27 crore. “In the coming years, this amount is expected to rise further,” Mr Patil added.

Deputy Chief Minister DK Shivakumar, Ministers KJ George, Priyank Kharge, Dr MC Sudhakara, Santosh Laud, Industries Department Principal Secretary S. Selvakumar, and KSDL’s Managing Director Dr PK Prashanth were present on the occasion.

Related Articles

Back to top button