Latest

KSRP ಅಸಿಸ್ಟೆಂಟ್ ಕಮಾಂಡೆಂಟ್ ಬಂಧಿಸಿದ ಸಿಐಡಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕೆ ಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ರೇವೂರ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಪಿಎಸ್ ಐ ನೇಮಕಾತಿ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಟೀಲ್ ಜತೆ ವೈಜನಾಥ್ ನಿಕಟ ಸಂಪರ್ಕದಲ್ಲಿದ್ದರು. ಅಲ್ಲದೇ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿಯೂ ಅಕ್ರಮ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ವೈಜನಾಥ್ ಅವರನ್ನು ನಿನ್ನೆ ವಶಕ್ಕೆ ಪಡೆದುಕೊಂಡಿತ್ತು.

ವಿಚಾರಣೆ ಬಳಿಕ ಇಂದು ಬಂಧಿಸಿರುವ ಸಿಐಡಿ ಅಧಿಕಾರಿಗಳು ವೈಜನಾಥ್ ಅವರನ್ನು ಮೆಡಿಕಲ್ ಟೆಸ್ಟ್ ಗೆ ಕರೆದೊಯ್ದಿದ್ದಾರೆ.
ಪಿಎಸ್ ಐ ಅಕ್ರಮ; 11 ಪೊಲೀಸ್ ಸಿಬ್ಬಂದಿಗಳು ಅಮಾನತು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button