
ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಸರಿಗೆ ನೌಕರರು ಮುಂಜಾನೆಯಿಂದಲೇ ಮುಷ್ಕರ ಆರಂಭಿಸಿದ್ದು, ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಬಸ್ ಗಳು ರಸ್ತೆಗಿಳಿದಿಲ್ಲ.
ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿಯೂ ಕೆ.ಎಸ್.ಆರ್.ಟಿ.ಸಿ ನೌಕರರು ಕೆಲಸಕ್ಕೆ ಗೈರಾಗಿ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಎಲ್ಲಾ ಬಸ್ ಗಳು ಬಸ್ ನಿಲ್ದಾಣ, ಡಿಪೋಗಳಲ್ಲಿ ನಿಂತಲ್ಲೇ ನಿಂತಿವೆ.
ಸರ್ಕಾರಿ ಬಸ್ ಗಳಿಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದು, ಖಾಸಗಿ ಬಸ್ ಗಳ ಖಾರುಬಾರು ಜೋರಾಗಿದೆ. ರಾಜ್ಯ ಸರ್ಕಾರ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ನಿಟ್ಟಿನಲ್ಲಿ ಖಾಸಗಿ ಬಸ್ ಗಳ ಸೇವೆ ಕಲ್ಪಿಸಿದೆ.
ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಸೂಚಿಸಲಾಗಿದೆ.
ಖಾಸಗಿ ಶಾಲಾ ವ್ಯಾನ್ ಗಳಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದೆ
ಹೆಚ್ಚುವರಿ ಮೆಟ್ರೋ ಟ್ರಿಪ್
ಡಿಸಿ, ಎಸಿಪಿಗಳು ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಸಾರಿಗೆ ನೌಕರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ.