Kannada NewsKarnataka NewsLatest
*ಕೆ.ಎಸ್.ಆರ್.ಟಿ.ಸಿ ಬಸ್ ಚಕ್ರಕ್ಕೆ ಸಿಲುಕಿದ ಬೈಕ್ ಸವಾರ: ಸಿಎ ಆರ್ ಸಿಬ್ಬಂದಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ರಾಜಾಜಿನಗರದ ರಾಜಕುಮಾರ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ನಿವೃತ್ತ ಸಿಎಆರ್ ಸಿಬ್ಬಂದಿ ಹನುಮಂತರಾಯಪ್ಪ (71) ಮೃತ ದುರ್ದೈವಿ.
ಬಾಗಲಕೋಟೆಯಿಂದ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ರಾಜಾಜಿನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಬಸ್ ಚಕ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.