CrimeKannada NewsKarnataka NewsTravel

*ಕೆಎಸ್‌ಆರ್‌ಟಿಸಿ ಬಸ್ ಅಪಘಾತ: 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಮತ್ತೊಂದು ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ ಚಾಲಕ ಹಾಗೂ ಓರ್ವ ಯುವತಿಯ ಸ್ಥಿತಿ ಅತ್ಯಂತ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯಸಿರಾ ತಾಲೂಕಿನಲ್ಲಿ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬಸ್ ಚಾಲಕನಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಇದರೊಂದಿಗೆ ಬಸ್‌ನಲ್ಲಿದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಆ ಪೈಕಿ ಓರ್ವ ಯುವತಿಯ ಸ್ಥಿತಿಯೂ ಚಿಂತಾಜನಕವಾಗಿದೆ. ಗಾಯಗೊಂಡಿರುವ ಪ್ರಯಾಣಿಕರ ತಲೆ, ಕೈ ಹಾಗೂ ಕಾಲುಗಳಿಗೆ ಗಂಭೀರ ಸ್ವರೂಪದ ಪೆಟ್ಟಾಗಿದ್ದು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಗಾಯಾಳುಗಳ ನೆರವಿಗೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿರಾ ನಗರ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button