*ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತ: ಇಬ್ಬರು ಪ್ರಯಾಣಿಕರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತಕ್ಕೀಡಾಗಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ನಡೆದಿದೆ. ಇಲ್ಲಿನ ಬೈರಾಪುರ ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ. ಮಂಡ್ಯ ಮೂಲದ ಶ್ವೇತಾ (38), ಬಾಲನಾಯಕ (42) ಮೃತ ದುರ್ದೈವಿಗಳು. ಬಸ್ ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿತ್ತು ಈ ವೇಳೆ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿರಗುಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Home add -Advt … Continue reading *ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತ: ಇಬ್ಬರು ಪ್ರಯಾಣಿಕರು ದುರ್ಮರಣ*
Copy and paste this URL into your WordPress site to embed
Copy and paste this code into your site to embed