Kannada NewsKarnataka NewsLatest

*ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಮೂವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ:  ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. 

ಬೆಂಗಳೂರಿನ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ಲಾಲಗೊಂಡನಹಳ್ಳಿ ಗೇಟ್ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt

ವರದಿಗಳ ಪ್ರಕಾರ ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಅತಿ ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್‌ಆರ್‌ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

Related Articles

Back to top button